ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ (FSSAI) 6 ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 11,2019ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಆಹಾರ ವಿಶ್ಲೇಷಕ |
| Organisation | ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ (FSSAI) |
| Educational Qualification | ಪದವಿ /ಸ್ನಾತಕೋತ್ತರ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ನೇಮಕಾತಿ ನಿಯಮಾನುಸಾರ |
| Application Start Date | October 16, 2019 |
| Application End Date | November 11, 2019 |
ವಿದ್ಯಾರ್ಹತೆ:
ರಸಾಯನಶಾಸ್ತ್ರ ಅಥವಾ ಜೀವರಾಸಾಯನಿಕ ಅಥವಾ ಮೈಕ್ರೋಬಯಾಲಜಿ ಅಥವಾ ಡೈರಿ ಕೆಮಿಸ್ಟ್ರಿ ಅಥವಾ ಆಹಾರ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಆಹಾರ ಮತ್ತು ಪೋಷಣೆ ಅಥವಾ ಡೈರಿ ಅಥವಾ ಎಣ್ಣೆ ವಿಷಯದಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ ಅಥವಾ ಪಶುವೈದ್ಯಕೀಯ ವಿಜ್ಞಾನದಲ್ಲಿ ಪದವಿಯನ್ನು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯತಕ್ಕದ್ದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.
ಸ್ಟೆಪ್ 1: ಅಭ್ಯರ್ಥಿಗಳು FSSAI ನ ಅಧಿಕೃತ ವೆಬ್‌ಸೈಟ್ https://www.fssai.gov.in/ ಗೆ ಹೋಗಿ
ಸ್ಟೆಪ್ 2: ನಂತರ FSSAI ಪೇಜ್ ಕೆಳಗಡೆ ಇರುವ Careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: FSSAI ಹುದ್ದೆಗಳ ಅಧಿಸೂಚನೆಯನ್ನು ಹುಡುಕಿ ತೆರೆಯಿರಿ
ಸ್ಟೆಪ್ 4: ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಗಮನವಿಟ್ಟು ಓದಿ
ಸ್ಟೆಪ್ 5: ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಸ್ಟೆಪ್ 6: ಎಲ್ಲವೂ ಸಂಪೂರ್ಣಗೊಂಡ ನಂತರ ಕೊನೆಯಲ್ಲಿ submit ಮಾಡಿ
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











