ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ10ಬೆರಳಚ್ಚುಗಾರ ಮತ್ತು 2 ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವ

ಜಿಲ್ಲಾ ನ್ಯಾಯಾಲಯ ಗದಗ ಘಟಕದಲ್ಲಿ ಖಾಲಿ ಇರುವ 10ಬೆರಳಚ್ಚುಗಾರ ಮತ್ತು 2 ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ನಲ್ಲಿ ಮಾರ್ಚ್11.2019 ರ ರಾತ್ರಿ 11:59ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಅರ್ಹತೆ, ಸಂಬಳ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಮುಂದಕ್ಕೆ ಓದಿ.

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification SSLC
Job Location ಗದಗ
Salary Scale ಬೆರಳಚ್ಚುಗಾರರು& ಬೆರಳಚ್ಚು ನಕಲುಗಾರರು- 21,400/- ರಿಂದ 42,000/- ರೂ
Application Start Date January 30, 2019
Application End Date March 11, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚುಗಾರರು ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ (ಜ್ಯೂನಿಯರ್ ಗ್ರೇಡ್) ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ವೇತನ:

ಹುದ್ದೆಗಳಿಗೆ ಆಯ್ಕೆಯಾದ ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ:

ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ35ವರ್ಷ
2A,2B,3A,3B ಅಭ್ಯರ್ಥಿಗಳಿಗೆ38ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ40ವರ್ಷ

ವಯೋಮಿತಿ ಸಡಿಲಿಕೆ:

ಮಾಜಿ ಸೈನಿಕರಿಗೆ ಗರಿಷ್ಠ ವಯೋಮಿತಿಯಲ್ಲಿ ಅವರು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವರೋ ಆ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ.

ವಿಧವೆಯರು, ಜೀತಕಾರ್ಮಿಕರು ಮತ್ತು ಅಂಗವಿಕಲರು ಸಂಬಂಧಿಸಿದ ಪ್ರಾಧಿಕಾರಗಳು ನೀಡುವ ಪ್ರಮಾಣ ಪತ್ರ ಹೊಂದಿದ್ದಲ್ಲಿ ವಯೋಮಿತಿಯಲ್ಲಿ ಗರಿಷ್ಠ 10 ವರ್ಷಗಳ ಸಡಿಲಿಕೆ ನೀಡಲಾಗುವುದು.

ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳ ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.

ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಭ್ಯರ್ಥಿಯು ಎಷ್ಟು ವ‍ರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸೇವೆ ಸಲ್ಲಿಸಿದ್ದರೆ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

ಅಭ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಅಭ್ಯರ್ಥಿಗಳು ರಾಜ್ಯ ಸರ್ಕಾರದಿಂದ ಪುರಸ್ಕೃತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡ ಗ್ರಾಮ ಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ ವರ್ಷಗಳು.

ಆಯ್ಕೆ ವಿಧಾನ:

ಬೆರಳಚ್ಚುಗಾರ ಹುದ್ದೆಗಳಿಗೆ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಕೆ ಆಯ್ಕೆ ಮಾಡಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಪ್ರವರ್ಗ- 1,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ50/-ರೂ
ಸಾಮಾನ್ಯ ವರ್ಗ100/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/gadag-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅರ್ಜಿ ಶುಲ್ಕವನ್ನು ಮಾರ್ಚ್ 14,2019 ರೊಳಗೆ ಪಾವತಿಸಬೇಕು.

ಬೆರಳಚ್ಚುಗಾರ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಬೆರಳಚ್ಚುನಕಲುಗಾರ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District Court of gadag has invited applications for 10 typist & 2 typist -copyist Posts. Interested candidates can apply through online from before 11th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+