ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 12 ಜವಾನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಜಿಲ್ಲಾ ನ್ಯಾಯಾಲಯ ಗದಗ ಘಟಕದಲ್ಲಿ ಖಾಲಿ ಇರುವ 12 ಜವಾನ ಹುದ್ದೆಗಳಿಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮಾರ್ಚ್11.2019 ರ ರಾತ್ರಿ 11:59ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಅರ್ಹತೆ, ಸಂಬಳ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಮುಂದಕ್ಕೆ ಓದಿ.

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ  ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜವಾನ
Organisation ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification 7 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಗದಗ
Salary Scale ಜವಾನ- 17,000/- ರಿಂದ 28,950/-ರೂ,
Application Start Date January 30, 2019
Application End Date March 11, 2019

ವಿದ್ಯಾರ್ಹತೆ:

ಜವಾನ ಹುದ್ದೆಗಳಿಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ವೇತನದ ವಿವರ:

ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ:

ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ35ವರ್ಷ
2A,2B,3A,3B ಅಭ್ಯರ್ಥಿಗಳಿಗೆ38ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ40ವರ್ಷ

ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ವಿಧಾನ:

ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಪ್ರವರ್ಗ- 1,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆರೂ.50/-
ಸಾಮಾನ್ಯ ವರ್ಗರೂ.100/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/gadag-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅರ್ಜಿ ಶುಲ್ಕವನ್ನು ಮಾರ್ಚ್ 14,2019 ರೊಳಗೆ ಪಾವತಿಸಬೇಕು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District Court of gadag has invited applications for 12 peon Post. Interested candidates can apply through online from before 11th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X