ಗದಗ ಜಿಲ್ಲೆಯ ನ್ಯಾಯಾಲಯದಲ್ಲಿ 10 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಗದಗ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 10 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಗದಗ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಗದಗ (ಕರ್ನಾಟಕ)
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ
Application Start Date October 30, 2019
Application End Date November 30, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ಎಸ್ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿರಬೇಕು.

ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವ ಜ್ಞಾನವು ಅವಶ್ಯವಾಗಿರುತ್ತದೆ.

ವಯೋಮಿತಿ:

ಈ ಹುದ್ದೆಗಳಿಗೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ಮತ್ತು ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38ವರ್ಷದ ವರೆಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.

ಆಯ್ಕೆಯ ವಿಧಾನ:

ಪ್ರತಿ ಅರ್ಹತಾ ಪರೀಕ್ಷೆಯು ಗರಿಷ್ಟ 100 ಅಂಕಗಳಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50ಅಂಕಗಳನ್ನು ಪಡೆಯತಕ್ಕದ್ದು. ಮತ್ತು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 5 ಅಂಕಗಳನ್ನೊಳಗೊಂಡಿರುತ್ತದೆ.

ಅಭ್ಯರ್ಥಿಗಳಿಗೆ ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ / ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು.

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಮತ್ತು ಪ್ರವರ್ಗ-1/ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಅಥವಾ ಆನ್‌ಲೈನ್ ಮೂಲಕ ಡಿಸೆಂಬರ್ 4,2019ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://karnatakajudiciary.kar.nic.in/districtrecruitment.asp ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2019ರ ಅನ್ವಯ 11:59ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of gadag recruitment 2019 notification has been released on official website for the recruitment of 10 stenographer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+