ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ5 ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಜಿಲ್ಲಾ ನ್ಯಾಯಾಲಯ ಗದಗ ಘಟಕದಲ್ಲಿ ಖಾಲಿ ಇರುವ 5 ಆದೇಶ ಜಾರಿಕಾರ ಹುದ್ದೆಗಳಿಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಮಾರ್ಚ್11.2019 ರ ರಾತ್ರಿ 11:59ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಅರ್ಹತೆ, ಸಂಬಳ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಮುಂದಕ್ಕೆ ಓದಿ.

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

 

CRITERIA DETAILS
Name Of The Posts ಆದೇಶ ಜಾರಿಕಾರ
Organisation ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಗದಗ
Salary Scale ಆದೇಶ ಜಾರಿಕಾರರಿಗೆ -ರೂ.19,950/- ರಿಂದ 37,900/-ರೂ
Application Start Date January 30, 2019
Application End Date March 11, 2019

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಲಘು/ಭಾರೀ ವಾಹನಾ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವೇತನ:

ಆದೇಶ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.19,950/- ರಿಂದ 37,900/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ:

ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ35ವರ್ಷ
2A,2B,3A,3B ಅಭ್ಯರ್ಥಿಗಳಿಗೆ38ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-140ವರ್ಷ

ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ವಿಧಾನ:

ಆದೇಶ ಜಾರಿಕಾರ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳ ಕನ್ನಡ ಭಾಷೆಯ ಪ್ರಾವೀಣ್ಯತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಪ್ರವರ್ಗ- 1,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ50/-ರೂ
ಸಾಮಾನ್ಯ ವರ್ಗ100/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/gadag-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅರ್ಜಿ ಶುಲ್ಕವನ್ನು ಮಾರ್ಚ್ 14,2019 ರೊಳಗೆ ಪಾವತಿಸಬೇಕು.

 

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District Court of gadag has invited applications for 5 Process server Posts. Interested candidates can apply through online from before 11th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more