ಗದಗ ಜಿಲ್ಲೆಯಲ್ಲಿ 110 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ ಖಾಲಿ ಇರುವ 110 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಗದಗ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜುಲೈ 11.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಗದಗ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆ ಮತ್ತು 76 ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗದಗ ಜಿಲ್ಲೆಯ   ಅಂಗನವಾಡಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
Organisation ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
Educational Qualification SSLC, 9ನೇ ತರಗತಿ
Job Location ಗದಗ ಜಿಲ್ಲೆ (ಕರ್ನಾಟಕ)
Application Start Date June 17, 2019
Application End Date July 11, 2019

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ). ಒಂದೇ ವಿದ್ಯಾರ್ಹತೆಯುಳ್ಳ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಹೆಚ್ಚು ಅಂಕಗಳಿಸಿದವರನ್ನು ಆಯ್ಕೆ ಮಾಡಲಾಗುವುದು.

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅಂಗನವಾಡಿ ಕಾರ್ಯಕರ್ತೆರ ನೇಮಕಾತಿಗಳಲ್ಲಿ ವಿಕಲಚೇತನರಿಗೆ ಗರಿಷ್ಟ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆಯ ಆದ್ಯತೆ:

ಈ ಕೆಳಕಂಡಂತೆ ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ.

ಆಸಿಡ್ ದಾಳಿಗೊಳಗಾದವರ ಆಯ್ಕೆ:

ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಅದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡತಕ್ಕದ್ದು.

ಎರಡನೇ ಆದ್ಯತೆ:

ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.

ವಿಧವೆಯರಿಗೆ ಆದ್ಯತೆ:

ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ.

ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು.

ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅಂಗವಿಕಲರಿಗೆ ಆದ್ಯತೆ:

ಅಂಗನವಾಡಿ ಕಾರ್ಯಕರ್ತೆಯು 3 ರಿಂದ6ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ. ಇತರೆ ದೈಹಿಕ ಅಂಗವಿಕಲ್ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು.

ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ.

ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 11,2019 ರ ಸಂಜೆ 5:30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.ಗದಗ ಜಿಲ್ಲೆಯ ಖಾಲಿ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಮಾನದಂಡವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Gadag Distrtict WCD recruitment notification has been released on official website for the recruitment of 110 Anganwadi Workers and Helpers post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+