ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಎಂಬಿಎ ಮತ್ತು ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,250/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅದಿಕೃತ ವೆಬ್‌ಸೈಟ್ https://www.gailonline.com/ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
SSmt Kimbuong Kipgen Secretary,
Public Enterprises Selection Board,
Public Enterprises Bhawan,
Block No. 14, CCGO Complex,
Lodhi Road,
New Delhi- 110003.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.