ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ 2021ರ ಸ್ಕೋರ್ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 15,2021ರಿಂದ ಮಾರ್ಚ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಮಾರ್ಚ್ 16,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಎಐಎಲ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಗೇಟ್ 2021ರ ಸ್ಕೋರ್, ಗುಂಪು ಚರ್ಚೆ / ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://gailonline.com/CR-ApplyingGail.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 15,2021 ರಿಂದ ಮಾರ್ಚ್ 16,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











