GAIL Recruitment 2021 : 220 ಇಂಜಿನಿಯರ್, ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) 220 ಇಂಜಿನಿಯರ್, ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಜಿಎಐಎಲ್ ನಲ್ಲಿ 220 ಹುದ್ದೆಗಳ ನೇಮಕಾತಿ

ಖಾಲಿ ಹುದ್ದೆಗಳ ವಿವರ:

ವ್ಯವಸ್ಥಾಪಕ - 10 ಹುದ್ದೆಗಳು
ಹಿರಿಯ ಇಂಜಿನಿಯರ್ - 122 ಹುದ್ದೆಗಳು
ಹಿರಿಯ ಅಧಿಕಾರಿ - 69 ಹುದ್ದೆಗಳು
ಅಧಿಕಾರಿ - 19 ಹುದ್ದೆಗಳು
ಒಟ್ಟು 220 ಹುದ್ದೆಗಳು

ವಿದ್ಯಾರ್ಹತೆ:

ಸಿ,ಎ/ಸಿಎಂಎ, ಬಿ.ಕಾಂ, ಬಿ.ಎ, ಬಿ.ಎಸ್ಸಿ, ಬಿ.ಇ/ಬಿ.ಟೆಕ್, ಎಂಬಿಎ, ಎಂಎಸ್‌ಡಬ್ಲ್ಯೂ, ಎಂಸಿಎ, ಸ್ನಾತಕೋತ್ತರ ಪದವಿ, ಪದವಿ, ಎಲ್‌ಎಲ್‌ಬಿ, ಎಲ್‌ಎಲ್‌ಎಂ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 28 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 50,000/- ರಿಂದ 2,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಪಂ/ಪ.ಜಾ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪಿಇಟಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.gailonline.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
GAIL recruitment 2021 notification has been released for 220 officer, engineer and manager posts. Interested candidates can apply through online before August 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X