GAIL Recruitment 2022 : 48 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 48 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 15,2022 ರಿಂದ ಮಾರ್ಚ್ 16,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 48 ಹುದ್ದೆಗಳ ನೇಮಕಾತಿ

GAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 65% ಅಂಕಗಳೊಂದಿಗೆ ಇನ್‌ಸ್ಟ್ರುಮೆಂಟೇಶನ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ತತ್ಸಮಾನ ಎಂಜಿನಿಯರಿಂಗ್ ವಿಭಾಗಗಳಲ್ಲಿ B.E/B.Tech/ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

GAIL ನೇಮಕಾತಿ 2022 ವಯೋಮಿತಿ :

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಮಾರ್ಚ್ 16,2022ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

GAIL ನೇಮಕಾತಿ 2022 ವೇತನದ ವಿವರ :

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

GAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ, ಗುಂಪು ಚರ್ಚೆ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

GAIL ನೇಮಕಾತಿ 2022 ಅರ್ಜಿ ಶುಲ್ಕ :

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

GAIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು GATE 2022 ಗೆ ನೋಂದಾಯಿಸಿರಬೇಕು ಮತ್ತು GATE 2022 ಆರ್ಗನೈಸಿಂಗ್ ಇನ್‌ಸ್ಟಿಟ್ಯೂಟ್ ಸೂಚಿಸಿದ ಸೂಚನೆಗಳು ಮತ್ತು ಟೈಮ್‌ಲೈನ್‌ಗಳ ಪ್ರಕಾರ GAIL 2022ಗೆ ಹಾಜರಾಗಿರಬೇಕು.

GAIL ನಲ್ಲಿ ಕಾರ್ಯನಿರ್ವಾಹಕ ಟ್ರೈನಿ ಉದ್ಯೋಗಗಳಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು GAIL ವೆಬ್‌ಸೈಟ್ https://gailebank.gail.co.in/Online_Recruit/online_apply.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಗೇಟ್ ೨೦೨೧ ರಿಜಿಸ್ಟ್ರೇಶನ್ ಸಂಖ್ಯೆಯನ್ನು ನಮೂದಿಸುವ ಮೂಲಕ ಫೆಬ್ರವರಿ 15,2022 ರಿಂದ ಮಾರ್ಚ್ 16,2022 ರಂದು ಸಂಜೆ 6:00 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
GAIL recruitment 2022 notification has been released for 48 executive trainee Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+