GESCOM: 26 ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ 26 ಮೈಕ್ರೋ ಫೀಡರ್ ಫ್ರಾಂಚೈಸಿ (ಗ್ರಾಮ ವಿದ್ಯುತ್ ಪ್ರತಿನಿಧಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಜೆಸ್ಕಾಂನಲ್ಲಿ 26 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಮೈಕ್ರೋ ಫೀಡರ್ ಫ್ರಾಂಚೈಸಿ (ಗ್ರಾಮ ವಿದ್ಯುತ್ ಪ್ರತಿನಿಧಿ)
Organisation ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
Educational Qualification ಡಿಪ್ಲೋಮಾ/ಐಟಿಐ/ಜೆ.ಓ.ಸಿ/ಪಿ.ಯು.ಸಿ/ಎಸ್‌ಎಸ್‌ಎಲ್‌ಸಿ
Job Location ಕೊಪ್ಪಳ (ಕರ್ನಾಟಕ)
Application Start Date January 14, 2020
Application End Date January 31, 2020

ವಿದ್ಯಾರ್ಹತೆ:

ಡಿಪ್ಲೋಮಾ/ಐಟಿಐ/ಜೆ.ಓ.ಸಿ/ಪಿ.ಯು.ಸಿ/ಎಸ್‌ಎಸ್‌ಎಲ್‌ಸಿ (ಡಿಪ್ಲೋಮಾ,ಐಟಿಐ, ಜೆಓಸಿ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆಯಿರುತ್ತದೆ) ಇದರಲ್ಲಿ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

‍ಷರತ್ತು:

ಅಭ್ಯರ್ಥಿಯು ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಕ್ರೋ ಫೀಡರ್ ಫ್ರಾಂಚೈಸಿ ಆಗಬಯಸುತ್ತಾನೋ ಆ ಗ್ರಾಮ ಪಂಚಾಯಿತಿಯ ಖಾಯಂ ನಿವಾಸಿಯಾಗಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಿರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪಡೆದ ಅಂಕ ಮತ್ತು ಅವರ ವಿದ್ಯಾಭ್ಯಾಸದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಡಿ.ಡಿಯನ್ನು ಕಾರ್ಯನಿರ್ವಾಹಕ ಅಭಿಯಂತರರು, ಕಾರ್ಯ ಮತ್ತು ಪಾಲನಾ ವಿಭಾಗ ಜೆಸ್ಕಾಂ, ಕೊಪ್ಪಳ/ಗಂಗಾವತಿ ರವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯಗಳು ಪ್ರಕಟಣೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ತಯಾರಿಸಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 31,2020ರೊಳಗೆ ನೊಂದಣಿ ಅಂಚೆ ಅಥವಾ ಖುದ್ದಾಗಿ ಬಂದು ವಿಭಾಗೀಯ ಕಛೇರಿಗೆ ಸಲ್ಲಿಸಬಹುದು, ಹಾಗೂ ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ವೀಕ್ಷಿಸಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
GESCOM recruitment 2020 notification has been released on official website for the recruitment of 26 village electric representative posts. Interested candidates can apply before 31st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X