ಜನರಲ್ ಇನ್‌ಶುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ 44 ಅಸಿಸ್ಟೆಂಟ್ ಮ್ಯಾನೇಜರ್ ಆಫೀಸರ್ (ಸ್ಕೇಲ್ I) ಕೇಡರ್ ನ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಪದವಿ, ಸಿಎ, ಎಲ್‌ಎಲ್‌ಬಿ, ಪಿಜಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಫೆಬ್ರವರಿ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಶುಲ್ಕ:
ಅರ್ಜಿದಾರರು 850/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.gicofindia.com/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











