ಜಿಐಸಿ ನೇಮಕಾತಿ 2019 : ವಿವಿಧ 25 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ (ಜಿಐಸಿ) 25 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಜಿಐಸಿಯಲ್ಲಿ ಉದ್ಯೋಗಾವಕಾಶ : ಆನ್‌ಲೈನ್‌ನಲ್ಲಿ ಸೆಪ್ಟೆಂಬರ್ 11 ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್
Organisation ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ (ಜಿಐಸಿ)
Educational Qualification ಬಿ.ಕಾಂ,ಬಿ.ಇ /ಬಿ.ಟೆಕ್, ಎಂಸಿಎ, ಎಲ್‌ಎಲ್‌ಬಿ / ಬಿಎಲ್‌ ಪದವಿ, ಪದವಿ, ಪೋಸ್ಟ್ ಗ್ರಾಜುಯೇಟ್,
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 32,795/- ರಿಂದ 62,315/-ರೂ ವೇತನ
Application Start Date August 21, 2019
Application End Date September 11, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಕಾಂ,ಬಿ.ಇ /ಬಿ.ಟೆಕ್, ಎಂಸಿಎ, ಎಲ್‌ಎಲ್‌ಬಿ / ಬಿಎಲ್‌ ಪದವಿ, ಪದವಿ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 21,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,795/- ರಿಂದ 62,315/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 500/ - ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿ‍ಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ (ಜಿಐಸಿ)ದ ಅಧಿಕೃತ ವೆಬ್‌ಸೈಟ್‌ https://www.gicofindia.com/en/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
GIC Recruitment 2019-20: Apply Online for 25 Assistant Manager (Scale -I) Vacancies. General Insurance Corporation of India (GIC) invited Online applications from eligible and interested candidates to fill up Assistant Manager (Scale -I) Posts through GIC official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+