ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 69 ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಎಲ್‌ಎಂಓ, ಸಿಎಂಓ, ಜ್ಯೂನಿಯರ್ ರೆಸಿಡೆಂಟ್ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪೋಸ್ಟ್ ಗ್ರಾಜುಯೇಟ್, ಎಂ.ಡಿ, ಎಂ.ಎಸ್, ಎಂಬಿಬಿಎಸ್, ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 67,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://karunadu.karnataka.gov.in/gimsgadag/Pages/Home.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮಾರ್ಚ್ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The director,
gadag institute of medical sciences,
mallasamudra,
gadag-582103.


Click it and Unblock the Notifications











