ಗೋವಾ ಶಿಪ್‌ಯಾರ್ಡ್ ನಲ್ಲಿ 11 ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಮಾರ್ಚ್ 23,2022 ರಿಂದ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

Goa Shipyard ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಗೋವಾ ಶಿಪ್‌ಯಾರ್ಡ್ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ, ಸಿಎ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Goa Shipyard ನೇಮಕಾತಿ 2022 ವಯೋಮಿತಿ :
ಗೋವಾ ಶಿಪ್‌ಯಾರ್ಡ್ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Goa Shipyard ನೇಮಕಾತಿ 2022 ವೇತನದ ವಿವರ :
ಗೋವಾ ಶಿಪ್‌ಯಾರ್ಡ್ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,60,000/-ರೂಗಳ ವರೆಗೆ ವೇತನ ನೀಡಲಾಗುವುದು.
Goa Shipyard ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಗೋವಾ ಶಿಪ್‌ಯಾರ್ಡ್ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
Goa Shipyard ನೇಮಕಾತಿ 2022 ಅರ್ಜಿ ಶುಲ್ಕ :
ಗೋವಾ ಶಿಪ್‌ಯಾರ್ಡ್ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Goa Shipyard ನೇಮಕಾತಿ 2022 ಅರ್ಜಿ ಸಲ್ಲಿಕೆ :
ಗೋವಾ ಶಿಪ್‌ಯಾರ್ಡ್ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://goashipyard.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಯ ಹಾರ್ಡ್ ಕಾಪಿಯನ್ನು ಕಚೇರಿಗೆ ಮೇ 4,2022ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ :
CGM (HR&A),
HR Department,
Dr. B.R. Ambedkar Bhavan,
Goa Shipyard Limited,
Vasco-Da-Gama, Goa - 403802.
ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











