ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್ -2 ಹುದ್ದೆಗೆ ನೇರ ನೇಮಕಾತಿ

By Nishmitha B

ಕೊಪ್ಪಳ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್ -2 ವೃಂದದ ನೇರ ನೇಮಕಾತಿ ಮೂಲಕ ಖಾಲಿ ಇರುವ ಬ್ಯಾಕ್‌ಲಾಗ್‌ನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತವಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಹೈದ್ರಾಬಾದ್ - ಕರ್ನಾಟಕ ಪ್ರದೇಶ ವ್ಯಾಪ್ತಿಯ ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ, ಕಲಬುರಗಿ, ಯಾದಗಿರಿ ಜಿಲ್ಲೆಯಗಳ ಅರ್ಹ ಪರಿಶಿಷ್ಠ ಜಾತಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನ ಕೊಪ್ಪಳ ಜಿಲ್ಲೆಯ ವೆಬ್‌ಸೈಟ್‌ ನಿಂದ ಪಡೆದುಕೊಳ್ಳಬಹುದಾಗಿದೆ.

ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್ -2 ಹುದ್ದೆಗೆ ನೇರ ನೇಮಕಾತಿ

ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ಹುದ್ದೆಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್ -2
ಹುದ್ದೆ ಸಂಖ್ಯೆ1
ಮೀಸಲಾತಿ ವರ್ಗಪ.ಜಾತಿ/ಮಹಿಳೆ
ವಿದ್ಯಾರ್ಹತೆಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ವಯೋಮಿತಿಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷ
ಅರ್ಜಿ ಶುಲ್ಕಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ31-3-2018

ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗೆ ಈ ಆಫೀಶಿಯಲ್ ಲಿಂಕ್ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ವಿಧಾನ:

ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ನೇರವಾಗಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಾರ್ಯಾಲಯಕ್ಕೆ ಪೋಸ್ಟ್ ಮಾಡತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಪರಿಶಿಷ್ಟ ಜಾತಿ ಮಹಿಳಾ ಅಭ್ಯರ್ಥಿ ಗ್ರೆಡ್ -2 ಕಾರ್ಯದರ್ಶಿ ಹುದ್ದೆಗೆ ನೇಮಕಾತಿ ಎಂದು ಬರೆದಿರಬೇಕು, ನಿಗದಿತ ದಿನಾಂಕದೊಳಗೆ ಬಂದ ತಲುಪಿದ ಅರ್ಜಿಗಳಲ್ಲಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮಾರ್ಚ್ 31 ಸಾಯಂಕಾಲ 5.30. ಅರ್ಜಿ ಸಲ್ಲಿಸಬೇಕಾದ ವಿಳಾಸ:
ಮುಖ್ಯ ಕಾರ್ಯ ನಿರ್ವಾಹ ಅಧಿಕಾರಿಗಳು
ಜಿಲ್ಲಾ ಪಂಚಾಯತ್ ಕಾರ್ಯಾಲಯ
ಕೊಪ್ಪಳ

For Quick Alerts
ALLOW NOTIFICATIONS  
For Daily Alerts

English summary
Koppal Zila Panchayat has released an employment notification calling out for aspirants to apply for the posts of Garde 2 vacancy. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X