GRSE Recruitment 2020: 11 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ಲಿಮಿಟೆಡ್ (ಜಿಆರ್‌ಎಸ್ಇ) 11 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನ..ಡಿ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ, ಸಿಎ/ಸಿಎಂಎ, ಪದವಿ, ಎಂಬಿಎ, ಪೋಸ್ಟ್ ಗ್ರಾಜುಯೇಟ್, ಡಿಪ್ಲೋಮಾ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಡಿಸೆಂಬರ್ 1,2020ರ ಅನ್ವಯ ಗರಿಷ್ಟ 52 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 2,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ, ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 571/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Post Box No.3076,
Lodhi Road,
New Delhi.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
GRSE recruitment 2020 notification has been released for 11 manager posts. Interested candidates can apply through online before December 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X