ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ 4 ಪ್ರಾಂಶುಪಾಲ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶಿವಮೊಗ್ಗ, ಕಡೂರು, ಗೌರಿಬಿದನೂರು ಮತ್ತು ಹಮ್ನಾಬಾದ್ ನಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ನವೆಂಬರ್ 30,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
GTTC ನೇಮಕಾತಿ 2021 ವಿದ್ಯಾರ್ಹತೆ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ನೇಮಕಾತಿಯ ಪ್ರಾಂಶುಪಾಲ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
GTTC ನೇಮಕಾತಿ 2021 ವಯೋಮಿತಿ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ನೇಮಕಾತಿಯ ಪ್ರಾಂಶುಪಾಲ ಹುದ್ದೆಗಳಿಗೆ ಕನಿಷ್ಟ 28 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
GTTC ನೇಮಕಾತಿ 2021 ವೇತನ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ನೇಮಕಾತಿಯ ಪ್ರಾಂಶುಪಾಲ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.
GTTC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ನೇಮಕಾತಿಯ ಪ್ರಾಂಶುಪಾಲ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
GTTC ನೇಮಕಾತಿ 2021 ಅರ್ಜಿ ಸಲ್ಲಿಕೆ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ನೇಮಕಾತಿಯ ಪ್ರಾಂಶುಪಾಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 30,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ವ್ಯವಸ್ಥಾಪಕ ನಿರ್ದೇಶಕ,
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ),
ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್,
ಬೆಂಗಳೂರು-560010.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











