ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿ ಮ್ಯಾನೇಜರ್, ಮೆಡಿಕಲ್ ಆಫೀಸರ್ & ಫಿನಾನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಮೇ 2,2019ರೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ಮ್ಯಾನೇಜರ್, ಮೆಡಿಕಲ್ ಆಫೀಸರ್ & ಫಿನಾನ್ಸ್ ಆಫೀಸರ್ |
| Organisation | ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) |
| Educational Qualification | ಇಂಜಿನಿಯರಿಂಗ್‌ನಲ್ಲಿ ಪದವಿ, ಯಾವುದೇ ಪದವಿ, ಸಿಎ/ಐಸಿಡಬ್ಲ್ಯೂಎ,ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಎಂಡಿ/ಡಿಎನ್‌ಬಿ |
| Job Location | ಬೆಂಗಳೂರು, ಕೊರಾಪುತ್.ಕೊರ್ವಾ |
| Salary Scale | ಮ್ಯಾನೇಜರ್ - 60,000/-ರಿಂದ 1,80,000/-ರೂ, ಫಿನಾನ್ಸ್ ಆಫೀಸರ್ ಮತ್ತು ಮೆಡಿಕಲ್ ಆಫೀಸರ್ -40,000/-ರಿಂದ 1,40,000/-ರೂ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ - 50,000/-ರಿಂದ 1,60,000/-ರೂ |
| Application Start Date | April 6, 2019 |
| Application End Date | May 2, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ, ಯಾವುದೇ ಪದವಿ, ಸಿಎ/ಐಸಿಡಬ್ಲ್ಯೂಎ,ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಎಂಡಿ/ಡಿಎನ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 48 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2 ವರ್ಷ ವಯೋಮಿತಿ ಸಡಿಲಿಕೆಯನ್ನು ಹೊಂದಿರುತ್ತಾರೆ.
ವೇತನದ ವಿವರ:
ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/-ರಿಂದ 1,80,000/-ರೂ, ಫಿನಾನ್ಸ್ ಆಫೀಸರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/-ರಿಂದ 1,40,000/-ರೂ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/-ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಮೇ 2,2019ರೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ:
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್,
15/1, ಕಬ್ಬನ್ ರೋಡ್,
ಬೆಂಗಳೂರು -560001


Click it and Unblock the Notifications











