ಹೆಚ್ಎಎಲ್‌ ನೇಮಕಾತಿ ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಹೆಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 10,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಹೆಚ್‌ಎಎಲ್‌ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳು
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್
Educational Qualification ಬಿಎ & ಬಿ.ಎಡ್
Job Location ಬೆಂಗಳೂರು , ಕರ್ನಾಟಕ
Salary Scale ಪಿಆರ್‌ಟಿ-ಇಂಗ್ಲೀಷ್- 25,500/-ರೂ ಮತ್ತು ಪಿಆರ್‌ಟಿ- ಸೋಷಿಯಲ್ ಸ್ಟಡೀಸ್ - 25,500/-ರೂ ಮತ್ತು ಟಿಜಿಟಿ-ಇಂಗ್ಲೀಷ್ -29,200/-ರೂ
Application Start Date March 28, 2019
Application End Date April 10, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಎ ಜೊತೆಗೆ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪಿಆರ್‌ಟಿ-ಇಂಗ್ಲೀಷ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರೂ ಮತ್ತು ಪಿಆರ್‌ಟಿ- ಸೋಷಿಯಲ್ ಸ್ಟಡೀಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರೂ ಮತ್ತು ಟಿಜಿಟಿ-ಇಂಗ್ಲೀಷ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಹೆಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 10,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ಹೆಚ್‌ಎಎಲ್‌ ನ್ಯೂ ಪಬ್ಲಿಕ್ ಸ್ಕೂಲ್,
ಸೆಂಟ್ರಲ್ ಟೌನ್‌ಶಿಪ್,
ಜವಾಹರ್ ನಗರ,
ನಮ್‌ಜೋಶಿ ರೋಡ್,
ಮಾರಥಹಳ್ಳಿ ಪೋಸ್ಟ್,
ಬೆಂಗಳೂರು-560037

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Hindustan Aeronautics limited recruitment notification has been released on official website for the recruitment of PRT and TGT posts.Interested candidates can apply through post before 10th april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+