ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ವಿಸಿಟಿಂಗ್ ಕನ್ಸಲ್ಟೆಂಟ್ |
Organisation | ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) |
Educational Qualification | ಎಂಬಿಬಿಎಸ್ ಜೊತೆಗೆ ಡಿಎಲ್‌ಓ/ಎಂಎಸ್/ಡಿಎನ್‌ಬಿ (ಇ.ಎನ್.ಟಿ) |
Job Location | ಬೆಂಗಳೂರು (ಕರ್ನಾಟಕ) |
Application Start Date | July 25, 2019 |
Application End Date | August 16, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂಬಿಬಿಎಸ್ ಜೊತೆಗೆ ಡಿಎಲ್‌ಓ/ಎಂಎಸ್/ಡಿಎನ್‌ಬಿ (ಇ.ಎನ್.ಟಿ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್
https://hal-india.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 16,2019 ರೊಳಗೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿಯ ವಿಳಾಸ:
ಸೀನಿಯರ್ ಮ್ಯಾನೇಜರ್,
ಮೆಡಿಕಲ್ ಮತ್ತು ಹೆಲ್ತ್ ಯುನಿಟ್ , ಹೆಚ್‌ಎಎಲ್ (ಬಿಸಿ),
ಸುರಂಜನ್‌ದಾಸ್ ರೋಡ್, (ಹಳೆ ಏರ್‌ಪೋರ್ಟ್ ಹತ್ತಿರ),
ಬೆಂಗಳೂರು-560017
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ