ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 22,2019 ರೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ಲ್ಯಾಬ್ ಟೆಕ್ನೀಶಿಯನ್ |
| Organisation | ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ |
| Educational Qualification | ಬಿ.ಎಸ್ಸಿ |
| Job Location | ಬೆಂಗಳೂರು, ಕರ್ನಾಟಕ |
| Application Start Date | March 12, 2019 |
| Application End Date | March 22, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮಾರ್ಚ್ 22,2019 ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಲ್ಯಾಬ್ ಟೆಕ್ನೀಶಿಯನ್ ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ 22 ಮಾರ್ಚ್ 2019ರೊಳಗೆ ಕಳುಹಿಸಬೇಕು.
ಕಚೇರಿಯ ವಿಳಾಸ:
ಮ್ಯಾನೇಜರ್ (ಹೆಚ್‌ಆರ್),
ಮೆಡಿಕಲ್ & ಹೆಲ್ತ್ ಯುನಿಟ್,
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್),
ಸುರಂಜನ್‌ದಾಸ್ ರೋಡ್ (ಓಲ್ಡ್ ಏರ್‌ಪೋರ್ಟ್ ಹತ್ತಿರ), ಬೆಂಗಳೂರು-560017
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











