HAL Recruitment 2020: ಬೆಂಗಳೂರಿನಲ್ಲಿ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ 11 ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್ ನಲ್ಲಿ ಉದ್ಯೋಗಾವಕಾಶ..ಅ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಡಾಕ್ಟರ್ ಹುದ್ದೆಗಳಿಗೆ ಎಂಬಿಬಿಎಸ್ ಜೊತೆಗೆ ಎಂಡಿ/ಡಿಎನ್‌ಬಿ/ಡಿಜಿಎಂ/ಎಂಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಸೀನಿಯರ್ ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಸೀನಿಯರ್ ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 98,850/-ರೂ ಮತ್ತು ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 79,080/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಟೈಪ್ ಮಾಡಿ ಅಥವಾ ಬರೆವಣಿಗೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 20,2020ರೊಳಗೆ ಪೋಸ್ಟ್ ಅಥವಾ ಕೊರಿಯರ್ ಮೂಲಕ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಛೇರಿಯ ವಿಳಾಸ:
ಸೀನಿಯರ್ ಮ್ಯಾನೇಜರ್,
ಮೆಡಿಕಲ್ ಮತ್ತು ಹೆಲ್ತ್ ಯುನಿಟ್,
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್,
ಸುರಂಜನದಾಸ್ ರಸ್ತೆ,
ಬೆಂಗಳೂರು-560017
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Hindustan Aeronautics limited recruitment 2020 notification has been released for 11 doctor posts. Interested candidates can apply before October 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+