ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ 100 ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 5,021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಏಪ್ರಿಲ್ 5,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 5,2021ರ ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











