ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) 165 ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸಸ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅನ್‌ಲೈನ್ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:
ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ - 87 ಹುದ್ದೆಗಳು
ಟೆಕ್ನೀಶಿಯನ್ ಅಪ್ರೆಂಟಿಸ್ - 78 ಹುದ್ದೆಗಳು
ಒಟ್ಟು 165 ಹುದ್ದೆಗಳು
ವಿದ್ಯಾರ್ಹತೆ:
ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹೆಚ್ಎಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಸ್ಟೈಫೆಂಡ್:
ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/Index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











