ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) 3 ವಿಸಿಟಿಂಗ್ ಕನ್ಸಲ್ಟೆಂಟ್ ಮತ್ತು ಕಾರ್ಡಿಯಾಲಜಿ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಎಂಬಿಬಿಎಸ್, ಎಂ.ಡಿ, ಡಿಎನ್‌ಬಿ, 10ನೇ ತರಗತಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 11,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Senior Manager (HR),
Medical and health unit,
Hindustan aeronautics limited (bangalore complex),
suranjandas road, (Near old airport),
Bangalore-560017.


Click it and Unblock the Notifications











