
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (ಹೆಚ್‌ಎಎಲ್) ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 4,2021 ರಿಂದ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
HAL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಡಿಪ್ಲೋಮಾ/ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
HAL ನೇಮಕಾತಿ 2021 ವಯೋಮಿತಿ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
HAL ನೇಮಕಾತಿ 2021 ವೇತನ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೆಚ್‌ಎಎಲ್ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು.
HAL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡಿಪ್ಲೋಮಾ ಅಥವಾ ಬಿ.ಇ/ಬಿ.ಟೆಕ್ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ/ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
HAL ನೇಮಕಾತಿ 2021 ಅರ್ಜಿ ಶುಲ್ಕ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
HAL ನೇಮಕಾತಿ 2021 ಅರ್ಜಿ ಸಲ್ಲಿಕೆ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://59.89.119.210/trg/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್ ಅರ್ಜಿಕೆಯ ಮೊದಲು ಅಭ್ಯರ್ಥಿಗಳು https://portal.mhrdnats.gov.in/boat/login/user_login.action ವೆಬ್‌ಸೈಟ್ ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ, ನಂತರ ರಿಜಿಸ್ಟರ್ ನಂಬರ್ ಅನ್ನು ಸೇವ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











