HAL Recruitment 2022 : 85 ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 85 ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 9,2022 ರಿಂದ ಮಾರ್ಚ್ 2,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಹೆಚ್‌ಎಎಲ್ ನಲ್ಲಿ 85 ಹುದ್ದೆಗಳ ನೇಮಕಾತಿ

HAL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಬಿ.ಟೆಕ್/ಬಿ.ಇ; ಪಿಜಿ ಪದವಿಇ/ಪಿಜಿ ಡಿಪ್ಲೋಮಾ/ಎಂಬಿಎ/ಎಂಎಸ್‌ಡಬ್ಲ್ಯೂ/ಎಂಎ; ಕಾನೂನು ಪದವಿ; ಸಿಎ/ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

HAL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಖಾಲಿ ಹುದ್ದೆಗಳ ವಿವರ ಇಲ್ಲಿದೆ :
ಮ್ಯಾನೇಜ್ಮೆಂಟ್ ಟ್ರೈನಿ - 47 ಹುದ್ದೆಗಳು
ಡಿಸೈನ್ ಟ್ರೈನಿ - 38 ಹುದ್ದೆಗಳು

ಒಟ್ಟು 85 ಹುದ್ದೆಗಳು

HAL ನೇಮಕಾತಿ 2022 ವಯೋಮಿತಿ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಮಾರ್ಚ್ 2,2022ರ ಅನ್ವಯ ಸಾಮಾನ್ಯ ವರ್ಗದ ಗರಿಷ್ಟ 28 ವರ್ಷ, ಓಬಿಸಿ ಯ ಗರಿಷ್ಟ 31 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 33 ವರ್ಷ ಮತ್ತು ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಂಗವಿಕಲ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

HAL ನೇಮಕಾತಿ 2022 ವೇತನದ ವಿವರ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

HAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

HAL ನೇಮಕಾತಿ 2022 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

HAL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://online.cbexams.com/halreg2022/Instructions ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 2,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
HAL recruitment 2022 notification has been released for 85 management trainee and design trainee Posts. Interested candidates can apply before March 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X