ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 6,2022 ರಿಂದ ಜುಲೈ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

HAL ನೇಮಕಾತಿ 2022 ವಿದ್ಯಾರ್ಹತೆ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
HAL ನೇಮಕಾತಿ 2022 ವಯೋಮಿತಿ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 21,2022ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
HAL ನೇಮಕಾತಿ 2022 ವೇತನ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ನೀಡಲಾಗುವುದು.

HAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
HAL ನೇಮಕಾತಿ 2022 ಅರ್ಜಿ ಶುಲ್ಕ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
HAL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 6 ರಿಂದ ಜುಲೈ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











