ಹಾಸನ ಜಿಲ್ಲಾ ನ್ಯಾಯಾಲಯ ಘಟಕ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಾಗೂ ಹೊಸದಾಗಿ ಸೃಜಿಸಲಾಗಿರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಹಾಸನ ಜಿಲ್ಲಾ ನ್ಯಾಯಾಲಯ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಸೆಪ್ಟೆಂಬರ್ 4 ರೊಳಗೆ ಸಲ್ಲಿಸತಕ್ಕದ್ದು.

ಹುದ್ದೆಗಳ ವಿವರ
ಬೆರಳಚ್ಚುಗಾರರು-10 ಹುದ್ದೆ
ವೇತನ ಶ್ರೇಣಿ: ರೂ.11600-21000/-
ಶೈಕ್ಷಣಿಕ ವಿದ್ಯಾರ್ಹತೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಹಿರಿಯ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಪರೀಕ್ಷೆಯಲ್ಲಿ ಗಳಿಸುವ ಅಂಕ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ವಯೋಮಿತಿ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35
- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 18 ರಿಂದ 38, ಹಾಗೂ ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ
ಇದನ್ನು ಗಮನಿಸಿ: ರಾಮನಗರ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ನೇಮಕಾತಿ
ಅರ್ಜಿ ಸಲ್ಲಿಕೆ
ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿಯನ್ನು ಆನ್‍ಲೈನ್ ಮೂಲಕ ನೊಂದಾಯಿಸಲು / ಸಲ್ಲಿಸಲು ದಿನಾಂಕ: 04.09.2017 ರ ರಾತ್ರಿ 11.59 ರವರೆಗೆ ಅವಕಾಶವಿರುತ್ತದೆ.
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: ರೂ.200/-
- ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
ಪರಿವೀಕ್ಷಣಾ ಅವಧಿ
ಆಯ್ಕೆಯಾದ ಅಭ್ಯಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಅಭ್ಯರ್ಥಿಗಳು ಮೂರು ತಿಂಗಳ ಒಳಗೆ ಸರ್ಕಾರವು ಅನಮೋದಿಸಿದ ಏಜೆನ್ಸಿಯಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಶೇ.60 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು ಪಾಸು ಮಾಡಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ


Click it and Unblock the Notifications











