ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಹಾಸನದಲ್ಲಿ ಇದೇ ತಿಂಗಳು 22 ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆ.22ರಂದು ಉದ್ಯೋಗ ಮೇಳ ನಡೆಯಲಿದ್ದು, ನೇರ ಸಂದರ್ಶನದ ಮೂಲಕ ವಿವಿಧ ಕಂಪನಿಗಳು ಸಾವಿರಾರು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಸೆ.22ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ಹಾಸನ ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.
ವಿದ್ಯಾರ್ಹತೆ
ಈ ಉದ್ಯೋಗ ಮೇಳದಲ್ಲಿ ಎಸ್ ಎಸ್ ಎಲ್ ಸಿ ಮತ್ತು ನಂತರದ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅಲ್ಲದೇ ಈಗಾಗಲೇ ಉದ್ಯೋಗದಲ್ಲಿ ಅನುಭವವಿರುವ ಮತ್ತು ಬೇರೆ ಉದ್ಯೋಗ ಬಯಸುವವರು ಕೂಡ ಭಾಗವಹಿಸಬಹುದು.
ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಎಂಬಿಎ, ಇಂಜಿನಿಯರಿಂಗ್, ಡ್ರೈವರ್, ನರ್ಸಿಂಗ್‌ನಲ್ಲಿ ತೇರ್ಗಡೆ ಹೊಂದಿದ 18 ರಿಂದ 25 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಯುವಕ/ಯುವತಿಯರು ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್, ಸ್ವ ವಿವರ,ಪ್ರತಿಗಳೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬೇಕು.
ಯುವಕ/ಯುವತಿಯರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ. ವಿಜಯಲಕ್ಷ್ಮಿ ಅವರನ್ನು ಭೇಟಿ ಮಾಡಬಹುದಾಗಿದೆ. ಕಚೇರಿ ದೂರವಾಣಿ ಸಂಖ್ಯೆ 08172-268374.


Click it and Unblock the Notifications











