ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ 9 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಹಾವೇರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ..ಫೆ.10ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಹಾವೇರಿ ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 27,650/- ರಿಂದ 52,650/-ರೂ
Application Start Date January 6, 2020
Application End Date February 10, 2020

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯು ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಪ್ರೌಢ ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.

ವಯೋಮಿತಿ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಕನಿಷ್ಠ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ ತಲಾ 05 ನಿಮಿಷಗಳ ಕನ್ನಡ ಮತ್ತು ಇಂಗ್ಲೀಷ್ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು 45 ನಿಮಿಷಗಳಲ್ಲಿ ಬೆರಳಚ್ಚು ಮಾಡತಕ್ಕದ್ದು.

ಅರ್ಹತಾ ಪರೀಕ್ಷೆಗಳು ಗರಿಷ್ಟ 100 ಅಂಕಗಳನ್ನು ಹೊಂದಿದ್ದು, ಉತ್ತೀರ್ಣರಾಗಲು ಕನಿಷ್ಟ 50 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹಾವೇರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ http://districts.ecourts.gov.in/haveri ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅಧಿಸೂಚನೆಯ ಪ್ರತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 10,2020ರ ಸಂಜೆ 6 ಗಂಟೆಯೊಳಗೆ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಹಾವೇರಿ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of haveri recruitment 2020 notification has been released on official website for the recruitment of 9 stenographer posts. Interested candidates can apply before 10th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+