HCSL Recruitment 2021: 11 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೂಗ್ಲಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಹೆಚ್ಸಿಎಸ್ಎಲ್) 11 ಆಪರೇಟರ್, ವೆಲ್ಡರ್, ಅಕೌಂಟೆಂಟ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೆಚ್‌ಸಿಎಸ್ಎಲ್ ನಲ್ಲಿ 11 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಸ್‌ಎಸ್‌ಎಲ್‌ಸಿ, ಐಟಿಐ, ಸಿಎ ಅಥವಾ ಐಸಿಎಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 22,500/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 400/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cochinshipyard.com/welcome ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಕೌಂಟೆಂಟ್ ಹುದ್ದೆಗಳ ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
HCSL recruitment 2021 notification has been released for 11 assistant, accountant and various posts. Interested candidates can apply before February 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X