ಹೌಸಿಂಗ್ ಡೆವಲಪ್ಮೆಂಟ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ (ಹೆಚ್‌ಡಿಎಫ್‌ಸಿ) 1367 ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರನವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 58,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.hdfcbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು,
ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











