HESCOM: 246 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತದಲ್ಲಿ ಇಲೆಕ್ಟ್ರೀಶಿಯನ್ ವೃತ್ತಿ ತರಬೇತಿಗಾಗಿ 246 ಶಿಶುಕ್ಷು/ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

246 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಹೆಸ್ಕಾಂ

CRITERIA DETAILS
Name Of The Posts ಅಪ್ರೆಂಟಿಸ್
Organisation ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ
Educational Qualification ಐಟಿಐ
Job Location ಹುಬ್ಬಳ್ಳಿ (ಕರ್ನಾಟಕ)
Salary Scale ತಿಂಗಳಿಗೆ 10,296/-ರೂ
Application Start Date January 31, 2020
Application End Date February 18, 2020

ವಿದ್ಯಾರ್ಹತೆ:

ಹುದ್ದೆಗಳಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ/ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.

ವಯೋಮಿತಿ:

ಫೆಬ್ರವರಿ 18,2020ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,926/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/2ಎ/2ಬಿ/ಓಬಿಸಿ ಅಭ್ಯರ್ಥಿಗಳು 100/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಅಥವಾ ಇತರೆ ರೂಪದಲ್ಲಿ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://www.hescom.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 18,2020ರ ಸಂಜೆ 4ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಕಾರ್ಯನಿರ್ವಾಹಕ ಇಂಜಿನೀಯರರು (ವಿ),
ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಸಿ),
ಹೆಸ್ಕಾಂ, ವಿದ್ಯುತ್ ನಗರ,
ಕಾರವಾರ ರಸ್ತೆ, ಹುಬ್ಬಳ್ಳಿ-24.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Hubli electricity supply company limited (HESCOM) recruitment 2020 notification has been released on official website for the recruitment of 246 apprentice posts. Interested candidates can apply before 18th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+