ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತದಲ್ಲಿ 18 ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 7,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ :
ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ ನೇಮಕಾತಿಯ ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಟೆಕ್, ಎಂ.ಎಸ್ಸಿ, ಎಂ.ಕಾಂ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.
ವಯೋಮಿತಿ :
ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ ನೇಮಕಾತಿಯ ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ ೩೦ ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ ನೇಮಕಾತಿಯ ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :
ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ ನೇಮಕಾತಿಯ ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ ನೇಮಕಾತಿಯ ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಸಂದರ್ಶನದ ವಿವರ :
ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ ನೇಮಕಾತಿಯ ಸಿವಿಲ್ ಇಂಜಿನಿಯರ್, ಜಿಯೋಲಜಿಸ್ಟ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://huttigold.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 7,2022ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
Hutti Gold Mines Company Limited, Company Administrative Office, Hutti - 584115, Raichur District, Karnataka
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











