ಕರ್ನಾಟಕ ಹೈಕೋರ್ಟಿನಲ್ಲಿ ಭಾಷಾಂತರಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ
ಭಾಷಾಂತರಗಾರರು ಒಟ್ಟು ಹುದ್ದೆ : 10
ಸ್ಥಳ : ಬೆಂಗಳೂರು
ವೇತನ ಶ್ರೇಣಿ: ರೂ.21600-40050/-
ವಿದ್ಯಾರ್ಹತೆ
ಇಂಗ್ಲೀಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ (ಕನಿಷ್ಟ ಎರಡನೇ ದರ್ಜೆಯಲ್ಲಿ ಪಾಸಾಗಿರಬೇಕು). ಪದವಿಯಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ
- ಎಸ್.ಸಿ/ಎಸ್.ಟಿ/ಪ್ರ-1 ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 40 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 18 ರಿಂದ 38 ವರ್ಷ
- ಇತರೆ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ (15/11/2017 ರಂತೆ ಅನ್ವಯ)
ನೇಮಕಾತಿ ಪ್ರಕ್ರಿಯೆ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಲಾಗುತ್ತದೆ.
ಲಿಖಿತ ಪರೀಕ್ಷೆ ವಿವರ
200 ಅಂಕಗಳ ಲಿಖಿತ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ಮೊದಲ ಪತ್ರಿಕೆಯು 100 ಅಂಕಗಳ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಜ್ಞಾನ ಹಾಗು ಎರಡನೇ ಪತ್ರಿಕೆಯು 100 ಅಂಕಗಳ ಭಾಷಾಂತರವನ್ನು ಒಳಗೊಂಡಿರುತ್ತದೆ.
ಮೌಖಿಕ ಪರೀಕ್ಷೆಯನ್ನು 50 ಅಂಕಗಳಿಗೆ ನಡೆಸಲಾಗುವುದು..
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
- ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/-
ಪ್ರಮುಖ ದಿನಾಂಕಗಳು
- ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-11-2017
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-11-2017
ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











