ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ 2 ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಆಸಕ್ತ ಅಭ್ಯರ್ಥಿಗಳು ನವೆಂಬರ್ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ನೋಡಿ.
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ಶ್ರೇಣಿ:
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್
https://karnatakajudiciary.kar.nic.in/ ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿ ವಿಳಾಸಕ್ಕೆ ನವೆಂಬರ್ 18,2019ರ ಸಂಜೆ 5ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ನಿರ್ದೇಶಕರು,
ಮಧ್ಯಸ್ಥಿಕೆ ಮತ್ತು ಸಂಧಾನ ಕೇಂದ್ರ-ಬೆಂಗಳೂರು (ದೇಶೀಯ ಮತ್ತು ಅಂತರರಾಷ್ಟ್ರೀಯ),
ಖಾನೀಜಾ ಭವನ,3ನೇ ಮಹಡಿ,ಪೂರ್ವ ವಿಂಗ್,
ನಂ.49,ರೇಸ್ ಕೋರ್ಸ್ ರಸ್ತೆ,
ಬೆಂಗಳೂರು -560001
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ