ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ: 56 ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 56 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸಿವಿಲ್ ನ್ಯಾಯಾಧೀಶ
Organisation ಕರ್ನಾಟಕ ಉಚ್ಚ ನ್ಯಾಯಾಲಯ
Educational Qualification ಕಾನೂನು ಪದವಿ
Job Location ಬೆಂಗಳೂರು
Salary Scale 27,700/- ರಿಂದ 44,770/-ರೂ
Application Start Date July 22, 2019
Application End Date August 22, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.

ವಯೋಮಿತಿ:

ಆಗಸ್ಟ್ 22,2019 ರ ಅನ್ವಯ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇರುತ್ತದೆ.

ವೇತನದ ಶ್ರೇಣಿ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27,700/- ರಿಂದ 44,770/-ರೂ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ್ರವರ್ಗ-2ಎ ಮತ್ತು 2ಬಿ ಅಭ್ಯರ್ಥಿಯು ರೂ.500/-ರೂ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳು ರೂ.250/-ರೂ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ನಮೂನೆಯಲ್ಲಿ ಕೂಡ ಪಾವತಿಸಬಹುದು. ಶುಲ್ಕ ಪಾವತಿಸಲು ಆಗಸ್ಟ್ 26,2019 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಉಚ್ಚ ನ್ಯಾಯಾಲಯದಲ್ಲಿ ಮತ್ತು ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಕಾನೂನು ಪದವಿಯನ್ನು ಹೊಂದಿರುವ ಮತ್ತು ಗರಿಷ್ಟ 40 ವರ್ಷ ವಯೊಮಿತಿಯೊಳಗಿನ ಸೇವಾನಿರತ ಅಭ್ಯರ್ಥಿಗಳೂ, ಅವರ ವೃಂದ ತಾರತಮ್ಯವಿಲ್ಲದೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://karnatakajudiciary.kar.nic.in/recruitment.asp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 22,2019 ರ ರಾತ್ರಿ 11:59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
High court of karnataka recruitment 2019 notification has been released on official website for the recruitment of 56 civil judge posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+