ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ 9 ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 9 ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 13,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ

CRITERIA DETAILS
Name Of The Posts ಚಾಲಕ
Organisation ಕರ್ನಾಟಕ ಉಚ್ಚ ನ್ಯಾಯಾಲಯ
Educational Qualification ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಬೆಂಗಳೂರು (ಕರ್ನಾಟಕ)
Salary Scale 25,500/- ರಿಂದ 81,100/-ರೂ
Application Start Date May 14, 2019
Application End Date June 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಭ್ಯರ್ಥಿಗಳು ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು ಮೋಟಾರು ವಾಹನ ಮತ್ತು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅಭ್ಯರ್ಥಿಯು ಇಂಗ್ಲೀಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯವರಾಗಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೇ ಹಿಂದುಳಿ ಜಾತಿಗಳ ಪ್ರವರ್ಗ-1 ಕ್ಕೆ ಸೇರಿದ ಪಕ್ಷದಲ್ಲಿ ಅವರು ಗರಿಷ್ಟ 40 ವರ್ಷ ಮತ್ತು ಇತರೇ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಥವಾ 2ಬಿ ಅಥವಾ 3ಎ ಅಥವಾ 3ಬಿ ಸೇರಿದ್ದಲ್ಲಿ ಗರಿಷ್ಟ 38 ವರ್ಷ ಮತ್ತು ಇತರೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಕೃತ ವೆಬ್‌ಸೈಟ್‌ ವೀಕ್ಷಿಸಬಹುದು.

ವೇತನದ ಶ್ರೇಣಿ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ರಿಂದ 81,100/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಅಭ್ಯರ್ಥಿಗಳು ( ಪರಿಶಿಷ್ಟ ಜಾತಿ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳನ್ನು ಹೊರತುಪಡಿಸಿ) ಹುದ್ದೆಗೆ ಸಂಬಂಧಿಸಿದಂತೆ ನಿಗದಿಪಡಿಸಿದ 250/-ರೂ ಮತ್ತು ಪರಿಶಿಷ್ಟ ಜಾತಿ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ನಮೂನೆಯಲ್ಲಿ ಕೂಡ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಲು ಜೂನ್ 17,2019 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://karnatakajudiciary.kar.nic.in/districtrecruitment.asp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 13,2019 ರ ರಾತ್ರಿ 11:59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
High court of karnataka recruitment 2019 notification has been released on official website for the recruitment of 9 driver posts. Interested candidates can apply through online for these posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+