ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ: 27 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ 27 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅಭ್ಯರ್ಥಿಗಳು ಮಾರ್ಚ್ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ನೋಡಿ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 27 ಹುದ್ದೆಗಳಿವೆ

CRITERIA DETAILS
Name Of The Posts ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ
Organisation ಕರ್ನಾಟಕ ಉಚ್ಚ ನ್ಯಾಯಾಲಯ
Educational Qualification 10ನೇ ತರಗತಿ/ತತ್ಸಮಾನ/ಡಿಪ್ಲೋಮಾ ಇನ್ ಕಮರ್ಷಿಯಲ್/ ಸೆಕ್ರೆಟರಿಯಲ್ ಪ್ರಾಕ್ಟೀಸ್ ಇನ್ ಇಂಗ್ಲೀಷ್ ; ಪದವಿ
Job Location ಕರ್ನಾಟಕ
Salary Scale ತಿಂಗಳಿಗೆ 44,990/- ರಿಂದ 1,42,000/-ರೂ
Application Start Date February 3, 2020
Application End Date March 4, 2020

ಶೈಕ್ಷಣಿಕ ವಿದ್ಯಾರ್ಹತೆ:

ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ 10ನೇ ತರಗತಿ/ತತ್ಸಮಾನ ವಿದ್ಯಾರ್ಹತೆ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಯು ಇಂಗ್ಲೀಷ್‌ ಶೀಘ್ರಲಿಪಿ ಪರೀಕ್ಷೆಯಲ್ಲಿ ಪ್ರೌಢದರ್ಜೆ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಪ್ರೌಢ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಮಾರ್ಚ್ 4,2020ರ ಅನ್ವಯ ಕನಿಷ್ಟ 18 ರಿಂದ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 3 ವರ್ಷ, ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಗರಿಷ್ಟ 5 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ಶ್ರೇಣಿ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,990/- ರಿಂದ 1,42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೀಘ್ರಲಿಪಿ ಪರೀಕ್ಷೆ, ಬೆರಳಚ್ಚು ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು (ಸಾಮಾನ್ಯ/ಓಬಿಸಿ) 400/-ರೂ ಅರ್ಜಿ ಶುಲ್ಕ ಮತ್ತು 200/-ರೂ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ) ಅರ್ಜಿ ಶುಲ್ಕವನ್ನು ಮಾರ್ಚ್ 7,2020ರೊಳಗೆ ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ https://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 4,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಶುಲ್ಕವನ್ನು ಮಾರ್ಚ್ 7,2020ರೊಳಗೆ ಪಾವತಿಸಲು ಅವಕಾಶವಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
High court of karnataka recruitment 2020 notification has been released on official website for the recruitment of 27 assistant court secretary posts. Interested candidates can apply before 4th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+