ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ: 53 ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ 53 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅಭ್ಯರ್ಥಿಗಳು ಮಾರ್ಚ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ನೋಡಿ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 53 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಿವಿಲ್ ನ್ಯಾಯಾಧೀಶ
Organisation ಕರ್ನಾಟಕ ಉಚ್ಚ ನ್ಯಾಯಾಲಯ
Educational Qualification ಕಾನೂನು ಪದವಿ
Job Location ಕರ್ನಾಟಕ
Salary Scale ತಿಂಗಳಿಗೆ 27,700/- ರಿಂದ 44,700/-ರೂ
Application Start Date February 25, 2020
Application End Date March 26, 2020

ಶೈಕ್ಷಣಿಕ ವಿದ್ಯಾರ್ಹತೆ:

ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.

ವಯೋಮಿತಿ:

ಮಾರ್ಚ್ 26,2020ರ ಅನ್ವಯ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ಮತ್ತು ಅನುಸೂಚಿತ ಜಾತಿ/ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಸಂದರ್ಭದಲ್ಲಿ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ, ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ಶ್ರೇಣಿ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಮಾರ್ಚ್ 30,2020ರೊಳಗೆ ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ https://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 26,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಶುಲ್ಕವನ್ನು ಮಾರ್ಚ್ 30,2020ರೊಳಗೆ ಪಾವತಿಸಲು ಅವಕಾಶವಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
High court of karnataka recruitment 2020 notification has been released on official website for the recruitment of 53 civil judge posts. Interested candidates can apply through online before 26th march 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+