ಪದವೀಧರರಿಗೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 30 ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯಾವುದೇ ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್ ̄ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಉಚ್ಚನ್ಯಾಯಾಲಯದ ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ.

ನೇಮಕಾತಿ ವಿಧಾನ
ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದಂಥ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ ನಿಯಮಗಳ ಅನುಸಾರವಾಗಿ ಮಾಡಲಾಗುವುದು.

ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಆಯ್ಕೆ ವಿಧಾನ

ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಯ ಆಯ್ಕೆಯನ್ನು ಲಿಖಿತ ಮತ್ತು ಮೌಖಿಕ ಪರೀಕ್ಷೆಗಳ ಅಂಕದ ಆಧಾರದ ಮೇಲೆ ಮಾಡಲಾಗುವುದು.

ಪರೀಕ್ಷೆ ವಿವರ

ಒಟ್ಟು ನೂರು ಅಂಕಗಳ ಪರೀಕ್ಷೆಯಲ್ಲಿ ಆಂಗ್ಲ ಭಾಷೆಯಲ್ಲಿ ಪ್ರಬಂಧ ಬರೆಯುವುದು, ಕನ್ನಡದಿಂದ ಆಂಗ್ಲ ಭಾಷೆಗೆ ಅನುವಾದ ಮಾಡುವುದು ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಕೇಳಲಾಗುತ್ತದೆ.

ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ಕಲೆ/ವಾಣಿಜ್ಯ/ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳ ಪದವಿಯಲ್ಲಿ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇ.55 ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇ.50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.

ಟಿಪ್ಪಣಿ : ಕಂಪ್ಯೂಟರ್ ನಿರ್ವಹಣಾ ಜ್ಞಾನವೆಂದರೆ ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು.

ವೇತನ ಶ್ರೇಣಿ: ರೂ.11600-21000/-

ಸೇವೆಯ ಪರಿವೀಕ್ಷಣ ಅವಧಿ

ಅಭ್ಯರ್ಥಿಯು ನೇಮಗೊಂಡ ಪಕ್ಷದಲ್ಲಿ ಪ್ರಾರಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

ವಯೋಮಿತಿ

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷದವರರಾಗಿರಬೇಕು.
  • ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೆ ಹಿಂದುಳಿದ ಜಾತಿಗಳ ಪ್ರವರ್ಗ-1ಕ್ಕೆ ಸೇರಿದ ಪಕ್ಷದಲ್ಲಿ ಅವರು ಗರಿಷ್ಟ 40 ವರ್ಷ ವಯಸ್ಸು ಮೀರಿರಬಾರದು.
  • ಇತರೆ ಹಿಂದುಳಿದ ವರ್ಗಗಳ ಪ್ರವರ್ಗ '2ಎ' ಅಥವಾ '2ಬಿ' ಅಥವಾ '3ಎ' ಅಥವಾ '3ಬಿ' ಗೆ ಸೇರಿದ್ದಲ್ಲಿ ಗರಿಷ್ಟ 38 ವರ್ಷ ವಯಸ್ಸು ಮೀರಿರಬಾರದು.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಸಲ್ಲಿಕೆ

ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ವೆಬ್ಸೈಟ್ ವಿಳಾಸ karnatakajudiciary.kar.nic.in

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ.250/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಪ್ರಮುಖ ದಿನಾಂಕಗಳು

  • ಆನ್‍ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2017
  • ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆಯ ದಿನಾಂಕ : 19-05-2017

ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ಗಮನಿಸಿ

ಇದನ್ನು ಗಮನಿಸಿ: ಜಿಲ್ಲಾ ನ್ಯಾಯಾಧೀಶರುಗಳ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
RECRUITMENT OF CANDIDATES FOR THE POST OF SECOND DIVISION ASSISTANT LAST DATE FOR SUBMISSION OF APPLICATION THROUGH ONLINE: 15.05.2017
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X