ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ 34 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 17,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂಬಿಬಿಎಸ್/ಬಿಡಿಎಸ್/ಬಿ.ವಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ವಯೋಮಿತಿ:
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ಅರ್ಹರು. ಅಭ್ಯರ್ಥಿಗಳಿಗೆ
ಕರ್ನಾಟಕ ರಾಜ್ಯ ಸರ್ಕಾರ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲು ಇಚ್ಛಿಸುವ ಅಭ್ಯರ್ಥಿಗಳು 2,500/-ರೂ ಅನ್ನು ಅರ್ಜಿ ಶುಲ್ಕವಾಗಿ ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ನೊಂದಣಿ ಪ್ರಕ್ರಿಯೆ:
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 15,2021ರ ಸಂಜೆ 5 ಗಂಟೆಯೊಳಗೆ ಭೇಟಿ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.
ಸಂದರ್ಶನ:
ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲು ಇಚ್ಛಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 17,2021ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://himshassan.karnataka.gov.in/ ಗೆ ಭೇಟಿ ನೀಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











