ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾವೇರಿಯಲ್ಲಿ 79 ಪ್ರಾಧ್ಯಾಪಕ, ಸೀನನಿಯರ್ ರೆಸಿಡೆಂಟ್ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 27ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಎಂಬಿಬಿಎಸ್ ಪದವಿ, ಪೋಸ್ಟ್ ಗ್ರಾಜುಯೇಷನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಪ್ಯಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 50 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 53 ವರ್ಷ ಮತ್ತು ಪ.ಜಾ/ಪ.ಪಂ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು
ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 48 ವರ್ಷ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು
ಸಹಾಯಕ ಪ್ರಾಧ್ಯಾಪಕ/ಟ್ಯೂಟರ್/ಸೀನಿಯರ್ ರೆಸಿಡೆಂಟ್/ಜ್ಯೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಗರಿಷ್ಟ 38 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಗರಿಷ್ಟ 43 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಹಿಮ್ಸ್ ನೇಮಕಾತಿಯ ಪ್ರಾಧ್ಯಾಪಕ, ಸೀನನಿಯರ್ ರೆಸಿಡೆಂಟ್ ಮತ್ತು ಟ್ಯೂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲೀಸ್ಟ್ ಮಾಡಿ ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 2,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಎಸ್‌ಬಿಐ ಕನೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಆಗಸ್ಟ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
The special officer,
Haveri Institute of medical sciences,
Haveri,
Karnataka.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.