ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ 5 ಹಿಂದಿ ಅನುವಾದಕ ಮತ್ತು ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಹಿಂದಿ ಅನುವಾದಕ ಮತ್ತು ಶೀಘ್ರಲಿಪಿಗಾರ |
| Organisation | ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ |
| Educational Qualification | ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಗ್ರಾಜುಯೇಟ್ |
| Job Location | ಭಾರತದೆಲ್ಲೆಡೆ |
| Salary Scale | ಹಿಂದಿ ಅನುವಾದಕ-ತಿಂಗಳಿಗೆ 18,480/- ರಿಂದ 45,400/-ರೂ ಮತ್ತು ಶೀಘ್ರಲಿಪಿಗಾರ-ತಿಂಗಳಿಗೆ 18,280/- ರಿಂದ 38,670/-ರೂ |
| Application Start Date | October 9, 2019 |
| Application End Date | November 8, 2019 |
ವಿದ್ಯಾರ್ಹತೆ :
ಹಿಂದಿ ಅನುವಾದಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಅನುವಾದಕ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನದ ವಿವರ:
ಹಿಂದಿ ಅನುವಾದಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,480/- ರಿಂದ 45,400/-ರೂ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,280/- ರಿಂದ 38,670/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 500/-ರೂ ಅರ್ಜಿ ಶುಲ್ಕವನ್ನು ನೆಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆಯ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹಿಂದೂಸ್ಥಾನ್ ಕಾಪರ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ https://www.hindustancopper.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











