Hindustan Copper Limited Recruitment 2022 : 96 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನಲ್ಲಿ 96 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 18,2022 ರಿಂದ ಮೇ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹತ್ತನೆ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಏಪ್ರಿಲ್ 1,2022ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://hindustancopper.com/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿದಗಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 18,2022 ರಿಂದ ಮೇ 21,2022ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
Senior Manager (HR), Hindustan Copper Limited, Malanjkhand Copper Project, Tehsil:- Birsa, PO - Malanjkhand, District - Balaghat, Madhya Pradesh - 481116.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Hindustan copper limited recruitment 2022 notification released for 96 trade apprentice posts. Interested candidates can apply before may 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X