HLL LIfecare Recruitment 2020: 20 ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಲ್‌ಎಲ್‌ ಲೈಫ್‌ಕೇರ್ ಲಿಮಿಟೆಡ್ 20 ಮ್ಯಾನೇಜರ್, ಟ್ರೈನಿ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹೆಚ್‌ಎಲ್‌ಎಲ್‌ ಲೈಫ್‌ಕೇರ್ ನಲ್ಲಿ 20 ಹುದ್ದೆಗಳ ನೇಮಕಾತಿ...ಡಿ.24ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂ.ಫಾರ್ಮಾ, ಬಿ.ಇ, ಬಿ.ಕಾಂ, ಎಂ.ಕಾಂ, ಬಿ.ಫಾರ್ಮಾ, ಐಟಿಐ, ಬಿ.ಎಸ್ಸಿ, ಎಸ್‌ಎಸ್‌ಎಲ್‌ಸಿ ಮತ್ತು ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ/ಓಬಿಸಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಎಕ್ಸಿಕ್ಯುಟಿವ್ ಅಥವಾ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 40,000/-ರೂ, ಕಮರ್ಸಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ 10,000/- ರಿಂದ 20,000/-ರೂ ವೇತನವನ್ನು ನೀಡಲಾಗುವುದು. ಫಾರ್ಮಾಸಿಸ್ಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ, ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,500/-ರೂ, ಐಟಿಐ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ, ಎಸ್‌ಎಸ್‌ಎಲ್‌ಸಿ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,500/-ರೂ, ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಶಿಪ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ, ಡಿಪ್ಲೋಮಾ ಅಪ್ರೆಂಟಿಶಿಪ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಮತ್ತು ಟ್ರೇಡ್ ಅಪ್ರೆಂಟಿಶಿಪ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6,750/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.lifecarehll.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಢು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 24,2020ರ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
General Manager (operations) and unit chief,
HLL lifecare limited,
Kanagala -591225.
Hukkeri (Taluk),
Belagavi (D),
Karnataka (S).

For Quick Alerts
ALLOW NOTIFICATIONS  
For Daily Alerts

English summary
HLL lifecare limited recruitment 2020 notification has been released for 20 manager, assistant and trainee posts. Interested candidates can apply before December 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X