HLL Lifecare limited Recruitment 2020: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ...ಡಿ.31ರೊಳಗೆ ಅರ್ಜಿ ಹಾಕಿ

ಹೆಚ್‌ಎಲ್‌ಎಲ್‌ ಲೈಫ್‌ಕೇರ್ ಲಿಮಿಟೆಡ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಲ್‌ಎಲ್‌ ಲೈಫ್‌ಕೇರ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..ಡಿ.31ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಐಟಿಐ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:

ಡಿಸೆಂಬರ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಐಟಿಐ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8000/- ರಿಂದ 9000/-ರೂ ಮತ್ತು ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8500/- ರಿಂದ 9500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.lifecarehll.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Joint General Manager (HR)
HLL Lifecare Limited
Peroorkada factory
Peroorkada P O
Thiruvananthapuram 695005
Kerala

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
HLL Lifecare limited recruitment 2020 notification has been released for trainee posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X