HMT machine tools Recruitment 2021 : 3 ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಹೆಚ್‌ಎಂಟಿ ಮೆಷಿನ್ ಟೂಲ್ಸ್ ನಲ್ಲಿ ಉದ್ಯೋಗಾವಕಾಶ

HMT ನೇಮಕಾತಿ 2021 ವಿದ್ಯಾರ್ಹತೆ:

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

HMT ನೇಮಕಾತಿ 2021 ವಯೋಮಿತಿ:

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ನವೆಂಬರ್ 1,2021ರ ಅನ್ವಯ ಗರಿಷ್ಟ 35 ವರ್ಷ ಮತ್ತು ಪ್ರಾಜೆಕ್ಟ್ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

HMT ನೇಮಕಾತಿ 2021 ವೇತನ:

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

HMT ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಕಿರುಪಟ್ಟಿಯನ್ನು ಮಾಡಿ ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

HMT ನೇಮಕಾತಿ 2021 ಅರ್ಜಿ ಶುಲ್ಕ:

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

HMT ನೇಮಕಾತಿ 2021 ಅರ್ಜಿ ಸಲ್ಲಿಕೆ:

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಡೆಪ್ಯುಟಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.hmtmachinetools.com/ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಡಿಸೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
Dy. General Manager (HR) I/c HR MTL
HMT Machine Tools Limited,
59, HMT Bhavan, Bellary Road,
Bangalore -560 032.

ಅಭ್ಯರ್ಥಿಗಳು ಸಲಹೆಗಾರ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
HMT machine tools limited recruitment 2021 notification released for 3 project deputy engineer posts. Interested candidates can apply before December 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+